
ನರೇಗಾ ಕಾಮಗಾರಿಗೆ ಯಂತ್ರಗಳ ಬಳಕೆ : ಕೂಲಿ ಮಾಡುವ ಬಡವರ ಹೊಟ್ಟೆಗೆ ತಣ್ಣೀರು ಬಟ್ಟೆ-Kodlapura-Kisan jagruti TV
ನರೇಗಾ ಕಾಮಗಾರಿಗೆ ಯಂತ್ರಗಳ ಬಳಕೆ : ಕೂಲಿ ಮಾಡುವ ಬಡವರ ಹೊಟ್ಟೆಗೆ ತಣ್ಣೀರು ಬಟ್ಟೆ
ಮಧುಗಿರಿ : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಖಾತರಿ ಉದ್ಯೋಗ ಯೋಜನೆಯ ಅಡಿಯಲ್ಲಿ ಸರಕಾರಕ್ಕೆ ಮೋಸ ಮಾಡಿ ಕೂಲಿ ಮಾಡುವ ಬಡವರ ಹೊಟ್ಟೆಗೆ ತಣ್ಣೀರು ಬಟ್ಟೆ ಹಾಕಲು ಮುಂದಾಗಿರುವ ಕೋಡ್ಲಾಪುರ ಗ್ರಾಮ ಪಂಚಾಯಿತಿ.
ಮಧುಗಿರಿ ತಾಲ್ಲೂಕಿನ ಕೊಡ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಗೋವಿಂದನಹಳ್ಳಿ ಗ್ರಾಮದ ಕೆರೆಯಲ್ಲಿ ಹೊಳು ಎತ್ತುವ ಕಾಮಗಾರಿಯಲ್ಲಿ ಕೂಲಿ ಕಾರ್ಮಿಕರ ಬದಲಿಗೆ ಜೆಸಿಬಿ ಯಂತ್ರಗಳಿಂದ ಕಾಮಗಾರಿ ಮಾಡಿರುವ ವಿಷಯ ಬೆಳಕಿಗೆ ಬಂದಿದೆ.
ನರೇಗಾ ಯೋಜನೆಯಡಿ 2 ಲಕ್ಷ ದ ಕಾಮಗಾರಿಯಲ್ಲಿ ಕೂಲಿ ಕಾರ್ಮಿಕರನ್ನು ಬಳಸಬೇಕೆಂಬ ನಿಯಮ ಉಲ್ಲಂಘಿಸಿ ಜೆಸಿಬಿ ಯಂತ್ರಗಳ ಬಳಕೆ ಯಾಗಿದೆ
ಕಾರ್ಮಿಕರ ಬದಲಿಗೆ ಯಂತ್ರೋಪಕರಣ ಬಳಸುತ್ತಿರುವುದಕ್ಕೆ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದರೂ ಗ್ರಾಮ ಪಂಚಾಯಿತಿ ಪಿಡಿಒ ಮತ್ತು ಅಧಿಕಾರಿಗಳು ಯಂತ್ರಗಳ ಮೂಲಕ ಕಾಮಗಾರಿ ನಡೆಸಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
0 Response to " ನರೇಗಾ ಕಾಮಗಾರಿಗೆ ಯಂತ್ರಗಳ ಬಳಕೆ : ಕೂಲಿ ಮಾಡುವ ಬಡವರ ಹೊಟ್ಟೆಗೆ ತಣ್ಣೀರು ಬಟ್ಟೆ-Kodlapura-Kisan jagruti TV"
Post a Comment