-->
ಅ.16 ರಿಂದ ಚುನಾವಣಾ ನೀತಿ ಸಂಹಿತೆ ಜಾರಿ-Dharwad

ಅ.16 ರಿಂದ ಚುನಾವಣಾ ನೀತಿ ಸಂಹಿತೆ ಜಾರಿ-Dharwad

ಅ.16 ರಿಂದ ಚುನಾವಣಾ ನೀತಿ ಸಂಹಿತೆ ಜಾರಿ; ಕರ್ತವ್ಯಕ್ಕೆ ನಿಯೋಜಿಸಿದ ಅಧಿಕಾರಿ, ಸಿಬ್ಬಂದಿಗಳು ಚುನಾಯಿತ ಪ್ರತಿನಿಧಿಗಳ ಭೇಟಿ, ಚರ್ಚೆನಿರ್ಬಂಧ

ಧಾರವಾಡ (ಕರ್ನಾಟಕ ವಾರ್ತೆ) ಆ.14:  ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಗೆ ಚುನಾವಣೆ ಘೋಷಣೆಯಾಗಿರುವುದರಿಂದ ಅಗಸ್ಟ್ 16 ರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗಲಿದೆ.ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಯಾವುದೇ ಅಧಿಕಾರಿ,ನೌಕರರು ಚುನಾಯಿತ ಪ್ರತಿನಿಧಿಗಳು,ರಾಜಕೀಯ ವ್ಯಕ್ತಿಗಳನ್ನು ಭೇಟಿಯಾಗುವುದು,ಚರ್ಚೆ ಮಾಡುವುದನ್ನು ನಿಬರ್ಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.

 ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಇಂದು ಸಂಜೆ ನಡೆದ ಮಾದರಿ ನೀತಿ ಸಂಹಿತೆ ಜಾರಿ ಕುರಿತ  ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
 ಮಾದರಿ ನೀತಿ ಸಂಹಿತೆಯು ಅಗಸ್ಟ 6 ರಿಂದ ಸೆಪ್ಟಂಬರ್ 9 ರವರೆಗೆ ಜಾರಿಯಲ್ಲಿರುತ್ತದೆ.ಎಲ್ಲ ರಾಜಕೀಯ ಪಕ್ಷಗಳು ಕಟ್ಟುನಿಟ್ಟಾಗಿ ಪಾಲಿಸಬೇಕು.ಮಹಾನಗರಪಾಲಿಕೆ ವ್ಯಾಪ್ತಿಗೆ ನೀತಿ ಸಂಹಿತೆ ಅನ್ವಯಿಸುತ್ತದೆ.ಯಾವುದೇ ಸಾಂಸ್ಕøತಿಕ,ಧಾರ್ಮಿಕ ಚಟುವಟಿಕೆಗಳಲ್ಲಿ ರಾಜಕೀಯ ವ್ಯಕ್ತಿಗಳು ಭಾಗವಹಿಸಲು ಅವಕಾಶವಿಲ್ಲ.ಯಾವುದೇ ನೇಮಕಾತಿ ಪ್ರಕ್ರಿಯೆ ನಡೆಸಬಹುದು ಆದರೆ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಬಾರದು.ಮುಂಬಡ್ತಿಗಳನ್ನು ನೀಡಲು ಬಾಧಕವಿಲ್ಲ.ಚುನಾವಣೆಗಳಲ್ಲಿ ಸರ್ಕಾರಿ ನೌಕರರು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು.ಯಾವುದೇ ರಾಜಕೀಯ ಕಾರ್ಯಕ್ರಮಗಳಿಗೆ ಪೂರ್ವಾನುಮತಿ ಕಡ್ಡಾಯವಾಗಿರುತ್ತದೆ.ವಿಡಿಯೋ ಚಿತ್ರೀಕರಣ,ಫೆÇೀಟೋ ದಾಖಲೆ ಕಾರ್ಯ ಸಮರ್ಪಕವಾಗಿ ನಡೆಯಬೇಕು ಎಂದರು.

 ಹುಬ್ಬಳ್ಳಿ ಧಾರವಾಡ ನಗರ ಪೆÇಲೀಸ್ ಆಯುಕ್ತ ಲಾಬೂರಾಮ್ , ಪ್ರಸಕ್ತ ಚುನಾವಣೆಯಲ್ಲಿ ಪೆÇಲೀಸ್ ಮತ್ತು ಅಬಕಾರಿ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹೆಚ್ಚು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಎಚ್ಚರವಹಿಸಬೇಕು ಎಂದರು.
ಡಿಯುಡಿಸಿಯ ಯೋಜನಾ ನಿರ್ದೇಶಕ ರುದ್ರೇಶ ಸಭೆಗೆ ಮಾದರಿ ನೀತಿ ಸಂಹಿತೆ ಕುರಿತು ಮಾಹಿತಿ ನೀಡಿದರು.Reported By:
ರಘುವೀರ್ ಸಿದ್ದಿ
ಧಾರವಾಡ

0 Response to "ಅ.16 ರಿಂದ ಚುನಾವಣಾ ನೀತಿ ಸಂಹಿತೆ ಜಾರಿ-Dharwad"

Post a Comment

Article Top Ads

Central Ads Article 1

Middle Ads Article 2

Article Bottom Ads