-->
ಡಿಮ್ಹಾನ್ಸ್ ಸಂಸ್ಥೆಯಲ್ಲಿ 75ನೇ  ಸ್ವಾತಂತ್ರೋತ್ಸವ ದಿನಾಚರಣೆ-Dharwad

ಡಿಮ್ಹಾನ್ಸ್ ಸಂಸ್ಥೆಯಲ್ಲಿ 75ನೇ ಸ್ವಾತಂತ್ರೋತ್ಸವ ದಿನಾಚರಣೆ-Dharwad

ಡಿಮ್ಹಾನ್ಸ್ ಸಂಸ್ಥೆಯಲ್ಲಿ 75ನೇ  ಸ್ವಾತಂತ್ರೋತ್ಸವ ದಿನಾಚರಣೆ

ಧಾರವಾಡ ಆ.17: ದೇಶದ 75ನೇ ಸ್ವಾತಂತ್ರೋತ್ಸವ ದಿನದ ಅಮೃತ ಮಹೋತ್ಸವ ವμರ್Áಚರಣೆ ಅಂಗವಾಗಿ ಡಿಮ್ಹಾನ್ಸ್ ಸಂಸ್ಥೆಯಲ್ಲಿ 75ನೇ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ಡಿಮ್ಹಾನ್ಸ್ ಸಂಸ್ಥೆಯ ನಿರ್ದೇಶಕರಾದ ಡಾ. ಮಹೇಶ ದೇಸಾಯಿ ಯವರು ದ್ವಜಾರೋಹಣ ಮಾಡಿದರು.

 ಈ ವೇಳೆ ಮಾತನಾಡಿದ ಅವರು, ಭಾರತ ದೇಶಕ್ಕೆ ಸ್ವಾತಂತ್ರ್ಯ ಬರುವಲ್ಲಿ ನಮ್ಮ ದೇಶದ ಸ್ವಾತಂತ್ರ ಹೋರಾಟಗಾರರ ತ್ಯಾಗ, ಬಲಿದಾನ ಮತ್ತು ಪ್ರಾಮಾಣಿಕ ಪ್ರಯತ್ನಗಳ ಫಲವಾಗಿ ನಾವು ಇಂದು ಸ್ವಾತಂತ್ರ್ಯದ ಆನಂದವನ್ನು ಅನುಭವಿಸುತ್ತಿದ್ದೇವೆ. ಇಂತಹ ಸ್ವಾತಂತ್ರ್ಯ ಹೋರಾಟಗಾರರನ್ನು ನಾವು ಸದಾ ಸ್ಮರಣೆ ಮಾಡಿಕೊಳ್ಳಬೇಕೆಂದು ತಿಳಿಸಿದರು. ಹಾಗೂ ಡಿಮ್ಹಾನ್ಸ್ ಸಂಸ್ಥೆಯನ್ನು ನಿಮ್ಹಾನ್ಸ್ ಸಂಸ್ಥೆಯ ಮಾದರಿಯಲ್ಲಿ ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನಗಳು ಆಗುತ್ತಿದ್ದು, ಇದಕ್ಕೆ ಈಗಾಗಲೇ ಹಲವು ರೀತಿಯ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. 
 ಡಿಮ್ಹಾನ್ಸ್ ಸಂಸ್ಥೆಯ ಬಹು ಸಂಶೋಧನಾ ಘಟಕದ ವತಿಯಿಂದ ಕೊರೊನಾ ಸೊಂಕಿತ ಪರೀಕ್ಷೆಗಳು ಸಾರ್ವಜನಿಕರಿಗೆ ಬಹಳಷ್ಟು ಪ್ರಮಾಣದಲ್ಲಿ ಅನುಕೂಲಕರವಾಗಿದೆ ಮತ್ತು ಇದಕ್ಕೆ ಈ ಸಂಶೋಧನಾ ಘಟಕದ ಸಿಬ್ಬಂದಿಗಳ ಪ್ರಾಮಾಣಿಕ ಪ್ರಯತ್ನಕ್ಕೆ ಅಭಿನಂದನೆಗಳನ್ನು ಸಲ್ಲಿಸಿದರು. ಕೋವಿಡ್ ಸಂದರ್ಭದಲ್ಲಿ ಡಿಮ್ಹಾನ್ಸ್ ಸಂಸ್ಥೆಯಿಂದ ಪ್ರಾರಂಭಿಸಲಾದ ಟೆಲಿಫೆÇೀಲಿನಿಕ್ ಕೌನ್ಸಿಲಿಂಗ್ ಬಹಳಷ್ಟು ರೀತಿಯಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಆಪ್ತಸಮಾಲೋಚನೆ ಮಾಡಿದ್ದರ ಬಗ್ಗೆ ಸ್ಮರಿಸಿದರು. ಮತ್ತು ಡಿಮ್ಹಾನ್ಸ್ ಸಂಸ್ಥೆಯ ಅಭಿವೃದ್ಧಿ ಪರ ಚಟುವಟಿಕೆಗಳ ಬಗ್ಗೆ ವಿವರಿಸಿದರು. ಡಿಮ್ಹಾನ್ಸ್ ಸಂಸ್ಥೆಯು ಗುಣಮಟ್ಟದ ಸೇವೆಗಳನ್ನು ನೀಡುವಲ್ಲಿ ಪ್ರಾಮುಖ್ಯತೆಯನ್ನು ನೀಡಲಾಗುತ್ತಿದೆ. ಹಾಗಾಗಿ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಹೊಂದಿರುವ ವ್ಯಕ್ತಿಗಳು ಡಿಮ್ಹಾನ್ಸ್ ಸಂಸ್ಥೆಯಲ್ಲಿ ಲಭ್ಯವಿರುವ ಸೇವೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಡಿಮ್ಹಾನ್ಸ್ ಸಂಸ್ಥೆಯ ನಿರ್ದೇಶಕರಾದ ಡಾ.ಮಹೇಶ ದೇಸಾಯಿಯವರು ಸಲಹೆ ನೀಡಿದರು.
 ಇದೇ ವೇಳೆಯಲ್ಲಿ ಈ ಕಾರ್ಯಕ್ರಮದಲ್ಲಿ ಡಿಮ್ಹಾನ್ಸ್ ಸಂಸ್ಥೆಯ ವೈದ್ಯಕೀಯ ಅಧೀಕ್ಷಕರಾದ ಡಾ.ಶ್ರೀನಿವಾಸ ಕೊಸಗಿ, ಮನೋರೋಗ ವಿಭಾಗದ ಮುಖ್ಯಸ್ಥರಾದ ಡಾ.ರಾಮಪ್ರಸಾದ .ಕೆ. ಹಾಗೂ ವಿವಿಧ ವಿಭಾಗಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ಡಿಮ್ಹಾನ್ಸ್ ಸಂಸ್ಥೆಯ ಕಚೇರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.Reported By:
ರಘು‌ ನರಗುಂದ
ಧಾರವಾಡ

0 Response to "ಡಿಮ್ಹಾನ್ಸ್ ಸಂಸ್ಥೆಯಲ್ಲಿ 75ನೇ ಸ್ವಾತಂತ್ರೋತ್ಸವ ದಿನಾಚರಣೆ-Dharwad"

Post a Comment

Article Top Ads

Central Ads Article 1

Middle Ads Article 2

Article Bottom Ads