-->
ಕೃಷ್ಣಾನದಿ ಪ್ರವಾಹ ಪೀಡಿತ ಗ್ರಾಮಗಳಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭೇಟಿ-Athani

ಕೃಷ್ಣಾನದಿ ಪ್ರವಾಹ ಪೀಡಿತ ಗ್ರಾಮಗಳಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭೇಟಿ-Athani

ಅಥಣಿ ತಾಲೂಕಿನ ಕೃಷ್ಣಾನದಿ ಪ್ರವಾಹ ಪೀಡಿತ ಗ್ರಾಮಗಳಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭೇಟಿ

ಈ ವೇಳೆ  ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಅಥಣಿ ಭಾಗಕ್ಕೆ ಮಂಜೂರು ಮಾಡಿದ ನೀರಾವರಿ ಯೋಜನೆಗಳ ಬಗ್ಗೆ ನಾನು ಬೆಂಗಳೂರಿಗೆ ಹೊಗಿ ಪರಿಶೀಲನೆ ಮಾಡುತ್ತೇನೆಂದರು.
ಸಂಪುಟ ಖಾತೆ ಹಂಚಿಕೆ ಬಗ್ಗೆ ಕೆಲವು ಸಚಿವರು ಬಹಿರಂಗವಾಗಿ ಅಸಮಾಧಾನ ಹೊರಹಾಕಿರುವ ಕುರಿತಂತೆ ಪ್ರತಿಕ್ರಿಯಿಸಿ, ಸಚಿವರಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು ಹೇಳಿದರು.
ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಗಡಿ ಗ್ರಾಮಗಳು ಹಾಗೂ ಚೆಕ್​ಫೋಸ್ಟ್​ಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೋವಿಡ್​ ಮೂರನೇ ಅಲೆ ಹಿನ್ನೆಲೆಯಲ್ಲಿ ‌ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ ಈಗಾಗಲೇ ಅನುಸರಿಸುತ್ತಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಸಚಿವರು ನೆರೆ ಬಾಧಿತ ಗ್ರಾಮಗಳಿಗೆ ಶಾಶ್ವತ ಪರಿಹಾರ ಹಾಗೂ ಯಾರೂ ಪರಿಹಾರದಿಂದ ವಂಚಿತರಾಗದಂತೆ ಸರಿಯಾಗಿ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ,ಚಿಕ್ಕೋಡಿ ಲೋಕಸಭಾ ಸಂಸದ ಅಣ್ಣಾಸಾಹೇಬ ಜೋಲ್ಲೆ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು .

1 Response to "ಕೃಷ್ಣಾನದಿ ಪ್ರವಾಹ ಪೀಡಿತ ಗ್ರಾಮಗಳಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭೇಟಿ-Athani"

Article Top Ads

Central Ads Article 1

Middle Ads Article 2

Article Bottom Ads