
ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಇಳಿಕೆ-Petrol Diesel Rate Today
Sunday, August 22, 2021
Comment
ದೆಹಲಿ:
ಹೆಚ್ಚಿನ ನಗರಗಳಲ್ಲಿ ಲೀಟರ್ ಪೆಟ್ರೋಲ್
ಬೆಲೆ (Petrol Price) 100ರ ಗಡಿ ದಾಟಿ
ಮುನ್ನುಗ್ಗಿದೆ. ಕಳೆದ 34 ದಿನಗಳಿಂದ
ಪೆಟ್ರೋಲ್ ಬೆಲೆ ಸ್ಥಿರವಾಗಿಯೇ
ಉಳಿದಿತ್ತು. ಕಡೆಯದಾಗಿ ಜುಲೈ 18ರಂದು
ಪೆಟ್ರೋಲ್ ಬೆಲೆಯನ್ನು ಏರಿಕೆ
ಮಾಡಲಾಗಿತ್ತು. ಕಳೆದ 3 ದಿನಗಳಿಂದ
ಡೀಸೆಲ್ ದರ (Diesel Price) ಇಳಿಕೆ
ಕಾಣುತ್ತಿತ್ತು. ಆದರೆ ಪೆಟ್ರೋಲ್ ದರದಲ್ಲಿ
ಯಾವುದೇ ಏರಿಳಿತ ಕಂಡು ಬಂದಿರಲಿಲ್ಲ.
ಆದರೆ ಇಂದು (ಆಗಸ್ಟ್ 22, ಭಾನುವಾರ)
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳೆರಡೂ
ಇಳಿಕೆ ಕಂಡು ಬಂದಿದೆ.
ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 20 ಪೈಸೆ ಅಗ್ಗವಾಗಿದೆ. ಲೀಟರ್ ಡೀಸೆಲ್ ಬೆಲೆಯಲ್ಲಿಯೂ 20 ಪೈಸೆ ಕಡಿತಗೊಳಿಸಲಾಗಿದೆ. ಆ ಬಳಿಕ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 101.64 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.07 ರೂಪಾಯಿ ಇದೆ.
ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 107.66 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.64 ರೂಪಾಯಿಗೆ ಇಳಿಕೆಯಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 98.92 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.13 ರೂಪಾಯಿಗೆ ಕುಸಿತ ಕಂಡಿದೆ.
ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ಬೆಲೆ 110.06 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.88 ರೂಪಾಯಿ ಇದೆ. ನೋಯ್ಡಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 98.92 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.64 ರೂಪಾಯಿಗೆ ಇಳಿಕೆ ಆಗಿದೆ.
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.
ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.
Reported By:
ರಘು ನರಗುಂದ
0 Response to "ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಇಳಿಕೆ-Petrol Diesel Rate Today "
Post a Comment