-->
ಕಾರ್ಮಿಕರ ಕಲ್ಯಾಣಕ್ಕೆ ಕಾನೂನು ಸೇವಾ ಪ್ರಾಧಿಕಾರವು ನೆರವಾಗಲಿದೆ-DWD

ಕಾರ್ಮಿಕರ ಕಲ್ಯಾಣಕ್ಕೆ ಕಾನೂನು ಸೇವಾ ಪ್ರಾಧಿಕಾರವು ನೆರವಾಗಲಿದೆ-DWD

ಕಾರ್ಮಿಕರ ಕಲ್ಯಾಣಕ್ಕೆ ಕಾನೂನು ಸೇವಾ ಪ್ರಾಧಿಕಾರವು ನೆರವಾಗಲಿದೆ ; ನ್ಯಾಯಾಲಯಗಳಲ್ಲಿ ಆಯೋಜಿಸುವ ಲೋಕ ಅದಾಲತ್ ಬಳಸಿಕೊಳ್ಳಿ - ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಸಂಜಯ ಗುಡಗುಡಿ 

ಧಾರವಾಡ ಸೆ.07: ಕಾರ್ಮಿಕರ ಹಿತಸಾಧನೆಗಾಗಿ ಹಾಗೂ ಅವರ ಕಲ್ಯಾಣಕ್ಕಾಗಿ ಅನೇಕ ಕಾನೂನುಗಳು ಅಸ್ತಿತ್ವದಲ್ಲಿವೆ. ಸರ್ಕಾರ, ಖಾಸಗಿ ಉದ್ಯಮಗಳು ಕಾರ್ಮಿಕರ ಹಿತಾಸಕ್ತಿ ಕಾಪಾಡಲು ಪ್ರಯತ್ನಿಸಬೇಕು. ಕಾನೂನು ಸೇವಾ ಪ್ರಾಧಿಕಾರವು ಉಚಿತವಾಗಿ ಕಾನೂನಿನ ಅರಿವು-ನೆರವು ನೀಡಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ನ್ಯಾಯಾಲಯವು ಆಯೋಜಿಸುವ ಲೋಕ ಅದಾಲತ್ ಬಳಸಿಕೊಂಡು ಕಾರ್ಮಿಕರು ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಸಂಜಯ ಗುಡಗುಡಿ ಅವರು ಹೇಳಿದರು. 
 ಅವರು ಇಂದು (ಸೆ.7) ಧಾರವಾಡ ಶ್ರೀನಗರದಲ್ಲಿರುವ ಪರಿಸರ ಭವನದಲ್ಲಿ ನಡೆದ ಕಾರ್ಮಿಕ ಅದಾಲತ್ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.

 ಸರಕಾರದಿಂದ ವಿವಿಧ ಯೋಜನೆಗಳ ಮೂಲಕ ಕಾರ್ಮಿಕರ ಕಲ್ಯಾಣಕ್ಕೆ ವಿವಿಧ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ. ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಕಾರ್ಮಿಕರು ಕಾರ್ಮಿಕ ಕಲ್ಯಾಣ ಇಲಾಖೆಯಲ್ಲಿ ಕಡ್ಡಾಯವಾಗಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು. ಇಲಾಖೆಯಿಂದ ಸಿಗುವ ಎಲ್ಲ ಅನುದಾನವನ್ನು ಪಡೆಯುವುದು ಕಾರ್ಮಿಕರ ಹಕ್ಕು ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಸಂಜಯ ಗುಡಗುಡಿ ಹೇಳಿದರು. 
 ಜಿಲ್ಲಾ ಕಾರ್ಮಿಕ ಅಧಿಕಾರಿ ಮಲ್ಲಿಕಾರ್ಜುನ ಜೋಗುರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾರ್ಮಿಕ ಇಲಾಖೆಯಿಂದ ನೀಡಲಾಗುತ್ತಿರುವ ವಿವಿಧ ಯೋಜನೆಗಳಡಿ ಆಗಸ್ಟ್ 16 ರಿಂದ ಸೆಪ್ಟೆಂಬರ್ 16 ರವರೆಗೆ ಆರ್ಥಿಕ ಸೌಲಭ್ಯಗಳನ್ನು ಕಾರ್ಮಿಕರಿಗೆ ಮತ್ತು ಕಾರ್ಮಿಕರ ಮಕ್ಕಳಿಗೆ ನೀಡಲು ವಿಶೇಷ ಅಭಿಯಾನದ ರೀತಿಯಲ್ಲಿ ಕಾರ್ಮಿಕನ ಅದಾಲತ್‍ನ್ನು ಹಮ್ಮಿಕೊಳ್ಳಲಾಗುತ್ತಿದೆ. ಆರ್ಥಿಕ ಸೌಲಭ್ಯವನ್ನು ನೀಡಲಾಗುತ್ತಿರುವ ಅರ್ಜಿಗಳನ್ನು ಒಂದು ತಿಂಗಳಲ್ಲಿ ವಿಲೇವಾರಿ ಮಾಡಿ ಕಲ್ಯಾಣ ಮಂಡಳಿಯಿಂದ ನೀಡುವ ಸಹಾಯ ಧನವನ್ನು ಕಾರ್ಮಿಕರಿಗೆ ತಲುಪಿಸಲು ಈ ಕಾರ್ಮಿಕ ಅದಾಲತ್‍ದಲ್ಲಿ ಆದ್ಯತೆ  ನೀಡಲಾಗಿದೆ ಎಂದು ಅವರು ಹೇಳಿದರು.  
 ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಮದುವೆಗೆ ಸಹಾಯಧನ, ವೈದ್ಯಕೀಯ ಸಹಾಯಧನ, ಪಿಂಚಣಿ ಯೋಜನೆ, ನಿವೃತ್ತಿ ವೇತನ, ಕುಟುಂಬ ಪಿಂಚಣಿ ಮತ್ತು ಕಟ್ಟಡ ನಿರ್ಮಾಣದಲ್ಲಿ ಅಪಘಾತ ಸಂಭವಿಸಿದರೆ ಧನಸಹಾಯ ಹೀಗೆ ವಿವಿಧ ಸೌಲಭ್ಯಗಳನ್ನು ಕಾರ್ಮಿಕ ಇಲಾಖೆಯಿಂದ ಕಲ್ಪಸಲಾಗಿದೆ ಎಂದು ಅವರು ಹೇಳಿದರು. 

 ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪುಷ್ಪಲತಾ ಸಿ.ಎಮ್ ಮಾತನಾಡಿ,  ಸರ್ಕಾರದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ಪಡೆಯಲು ಕಾರ್ಮಿಕರು ತಪ್ಪದೇ ನೊಂದಣಿ ಮಾಡಿಸಬೇಕು. ನೊಂದಣಿ ಮಾಡಿದ ಕಾರ್ಮಿಕರು ಸರ್ಕಾರದಿಂದ ಬರುವ ಸೌಲಭ್ಯಗಳಿಂದ ವಂಚಿತವಾದರೆ ಕಾನೂನು ಅಡಿ ಅವರಿಗೆ ನಿರ್ದಿಷ್ಟ ಸೌಲಭ್ಯ ದೊರಕಿಸಿ ಕೊಡುವಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸಹಾಯ ಮಾಡುತ್ತದೆ. ಮತ್ತು ಸರ್ಕಾರದ ಯೋಜನೆಗಳನ್ನು ಪಡೆಯಲು ಕಾನೂನು ಪ್ರಾಧಿಕಾರದ ಮೂಲಕ ತಿಳುವಳಿಕೆಯನ್ನು ನೀಡುವ ಪ್ರಯತ್ನ ಮಾಡಲಾಗುತ್ತಿದೆ ಎಂದರು. 
 ಈ ಸಂದರ್ಭದಲ್ಲಿ ಹಿರಿಯ ಕಾರ್ಮಿಕ ನಿರೀಕ್ಷಕರಾದ ಅಕ್ರಮ ಅಲ್ಲಾಪೂರ, ಮೀನಾಕ್ಷಿ ಸಿಂದಿಹಟ್ಟಿ, ಸಂಗೀತಾ ಬೆನಕನಕೊಪ್ಪ, ರಜನಿ ಹಿರೇಮಠ, ಕಾರ್ಮಿಕ ಇಲಾಖೆಯ ಸಿಬ್ಬಂದಿ ವರ್ಗ ಸೇರಿದಂತೆ ಜಿಲ್ಲೆಯ ಕಟ್ಟಡ ಕಾರ್ಮಿಕರು ಉಪಸ್ಥಿತರಿದ್ದರು. ಜಿಲ್ಲಾ ಕಾರ್ಮಿಕ ಅಧಿಕಾರಿ ಲಲಿತಾ ಸಾತೇನಹಳ್ಳಿ  ವಂದಿಸಿದರು. ಹಿರಿಯ ಕಾರ್ಮಿಕ ನಿರೀಕ್ಷಕ ಅಶೋಕ ಒಡೆಯರ  ಕಾರ್ಯಕ್ರಮ ನಿರೂಪಿಸಿದರು.

ವರದಿ:
ರಘು ನರಗುಂದ

0 Response to "ಕಾರ್ಮಿಕರ ಕಲ್ಯಾಣಕ್ಕೆ ಕಾನೂನು ಸೇವಾ ಪ್ರಾಧಿಕಾರವು ನೆರವಾಗಲಿದೆ-DWD"

Post a Comment

Article Top Ads

Central Ads Article 1

Middle Ads Article 2

Article Bottom Ads