-->
ಬೃಹತ್ ಕೋವಿಡ್ ಲಸಿಕಾ ಅಭಿಯಾನ-dwd

ಬೃಹತ್ ಕೋವಿಡ್ ಲಸಿಕಾ ಅಭಿಯಾನ-dwd

ಸೆ.17 ಬೃಹತ್ ಕೋವಿಡ್ ಲಸಿಕಾ ಅಭಿಯಾನ

ಪಾಲಿಕೆ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಸಂರ್ಕಿರ್ಣಗಳಲ್ಲಿನ ಎಲ್ಲ ಉದ್ದಿಮೆದಾರರು ಹಾಗೂ ಕಾರ್ಮಿಕರು ಕೋವಿಡ್ ಲಸಿಕೆ ಪಡೆಯಲು- ಪಾಲಿಕೆ ಆಯುಕ್ತರಿಂದ ಆದೇಶ

ಧಾರವಾಡ  ಸೆ.15: ಸೆಪ್ಟಂಬರ್ 17 ರಂದು ಜಿಲ್ಲೆಯಾದ್ಯಂತ ಕೋವಿಡ್ ಲಸಿಕೆ ಕೇಂದ್ರಗಳಲ್ಲಿ ಬೃಹತ್ ಕೋವಿಡ್-19 ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಆ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ವಿಶೇಷವಾಗಿ ಉದ್ದಿಮೆದಾರರು ಹಾಗೂ ಕಾರ್ಮಿಕರು ತಮ್ಮ ಸಮೀಪದ ಲಸಿಕಾ ಕೇಂದ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ ಲಸಿಕೆಯನ್ನು ಪಡೆದು ಅಭಿಯಾನವನ್ನು ಯಶಸ್ವಿಗೊಳಿಸಲು ಹಾಗೂ ಸೆಪ್ಟಂಬರ್-2021 ರ ಅಂತ್ಯದ ಒಳಗಾಗಿ ಎಲ್ಲರೂ ಲಸಿಕೆಯನ್ನು ಪಡೆಯಲು ಮತ್ತು ಕೋವಿಡ್ – 19 ಮಾರ್ಗಸೂಚಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ ಆದೇಶಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಹುಬ್ಬಳ್ಳಿ-ಧಾರವಾಡ ಮಹಾನಗರವು ರಾಜ್ಯದ ಎರಡನೇ ಅತಿ ದೊಡ್ಡ ನಗರವಾಗಿದ್ದು, ಪಾಲಿಕೆ ವ್ಯಾಪ್ತಿಯ ವಾಣಿಜ್ಯ ಸಂಕಿರ್ಣಗಳಲ್ಲಿ ಪ್ರಮುಖ ವಾಣಿಜ್ಯ ಕಟ್ಟಡಗಳಲ್ಲಿ ಹಾಗೂ ಅಂಗಡಿ ಮುಗ್ಗಟ್ಟಗಳಲ್ಲಿ ವಿವಿಧ ರೀತಿಯ ಉದ್ದಿಮೆಗಳು, ಅಂಗಡಿಗಳು ಹಾಗೂ ಇನ್ನಿತರ ವಾಣಿಜ್ಯ ವ್ಯಾಪಾರ, ವ್ಯವಹಾರಗಳು ನಡೆಸುತ್ತಿದ್ದು, ನಮ್ಮ ನಗರಕ್ಕೆ ನೆರೆ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಕೇರಳದಿಂದ ವ್ಯಾಪಾರ ಸಂಪರ್ಕವುವಿರುತ್ತದೆ. ನಗರದ ವ್ಯಾಪಾರ ಸಂಕೀರ್ಣಗಳಲ್ಲಿ ಸಾವಿರಾರು ಜನ ಕೆಲಸ ಮಾಡುತ್ತಿದ್ದು, ವ್ಯವಹಾರಕ್ಕಾಗಿ ದಿನನಿತ್ಯ ಹಲವಾರು ಸಾರ್ವಜನಿಕರು ಬರುತ್ತಿರುತ್ತಾರೆ.

ಈಗಾಗಲೇ ಕೋವಿಡ್-19 ಎರಡನೇ ಅಲೆಯನ್ನು ತಡೆಗಟ್ಟಲು ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಆಶ್ರಯದಲ್ಲಿ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಅವಳಿನಗರದ ವ್ಯಾಪ್ತಿಯ ಒಟ್ಟು 201 ಕೇಂದ್ರಗಳಲ್ಲಿ ದಿನನಿತ್ಯ ಕೋವಿಡ್ ಲಸಿಕೆ ಕಾರ್ಯಕ್ರಮವನ್ನು ನಿರಂತರವಾಗಿ ಕೈಗೊಳ್ಳಲಾಗುತ್ತಿದೆ. ವಾಣಿಜ್ಯ ಸಂಕೀರ್ಣಗಳಿಗೆ ಹಾಗೂ ವಿವಿಧ ವ್ಯಾಪಾರ ಕೇಂದ್ರಗಳಿಗೆ ಆಗಮಿಸುವ ಸಾರ್ವಜನಿಕರು ಹಾಗೂ ಉದ್ದಿಮೆದಾರರು ಮತ್ತು ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ ಸೊಂಕು ಹರಡದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕೋವಿಡ್-19 ಮಾರ್ಗಸೂಚಿ ನಿಯಮಗಳನ್ನು ಉಲ್ಲಂಘಿಸಿ ಕೋವಿಡ್-19 ಹರಡಲು ಕಾರಣವಾದಂತಹ ಉದ್ದಿಮೆ, ವಾಣಿಜ್ಯ ಸಂಕೀರ್ಣ, ಅಂಗಡಿಗಳಿಗೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ ಹಾಗೂ ಶರತ್ತುಗಳನ್ವಯ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಉದ್ದಿಮೆದಾರರಿಗೆ ತಿಳಿಸಲು ಹಾಗೂ ಸೂಕ್ತ ಕ್ರಮ ಜರುಗಿಸಲು ಎಲ್ಲ ಪರಿಸರ ಅಭಿಯಂತರರಿಗೆ ಹಾಗೂ ಆರೋಗ್ಯ ನಿರೀಕ್ಷಕರಿಗೆ ಸೂಚಿಸಿ ಆದೇಶಿಸಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ ತಿಳಿಸಿದರು.


ವರದಿ:
ರಘು ನರಗುಂದ

0 Response to "ಬೃಹತ್ ಕೋವಿಡ್ ಲಸಿಕಾ ಅಭಿಯಾನ-dwd"

Post a Comment

Article Top Ads

Central Ads Article 1

Middle Ads Article 2

Article Bottom Ads