
ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗಳಿಗೆ ಸನ್ಮಾನ: ಸಂಘಟನೆಯ ಪದಾಧಿಕಾರಿಗಳ ಆಯ್ಕೆ- Hubballi
Monday, September 27, 2021
Comment
ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗಳಿಗೆ ಸನ್ಮಾನ: ಸಂಘಟನೆಯ ಪದಾಧಿಕಾರಿಗಳ ಆಯ್ಕೆ- Hubballi
ಹುಬ್ಬಳ್ಳಿ:
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಜಯಗಳಿಸಿದ ನಾಯಕ ಶ್ರೀ ರಾಜಣ್ಣ ಕೊರವಿ ಹಾಗೂ ಶ್ರೀ ಶರೀಫ್ ಅದಾನಿ ಮತ್ತು ಹಿರಿಯರಾದ ಶ್ರೀ ಮಹಾದೇವಪ್ಪ ನರಗುಂದ ಅವರಿಗೆ ಜೈ ಭೀಮ ಸಂಘರ್ಷ ರಾಜ್ಯ ಸಮಿತಿಯ ವತಿಯಿಂದ
ಸನ್ಮಾನಿಸಲಾಯಿತು ಮತ್ತು ಜೈ ಭೀಮ ಸಂಘರ್ಷ ರಾಜ್ಯ ಸಮಿತಿಯ ನೂತನ ಉತ್ತರ ಕರ್ನಾಟಕದ ಕಾರ್ಮಿಕ ಘಟಕದ ಅಧ್ಯಕ್ಷರನ್ನಾಗಿ ಶ್ರೀ ದಾರ್ಲಾ ದಾಸ್
ಅವರನ್ನು ಆಯ್ಕೆ ಮಾಡಲಾಯಿತು.
ಹಲವಾರು ಸಮಾಜ ಸೇವೆ ಮಾಡುತ್ತಾ ಬಂದಿರುವ ಜೈ ಭೀಮ ಸಂಘರ್ಷ ಸಮಿತಿಯು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಅಭ್ಯರ್ಥಿಗಳನ್ನು ನಗರದ ಪ್ರವಾಸಿ ಮಂದಿರದಲ್ಲಿ ಸನ್ಮಾನ ಮಾಡಿ, ಗೌರವಿಸಲಾಯಿತು.
ಸಂಘಟನೆಯ ಪದಾಧಿಕಾರಿಗಳ ನೇಮಕ
ಇದೇ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳ ನೇಮಕ ಮಾಡಲಾಯಿತು. ಉತ್ತರ ಕರ್ನಾಟಕದ ಕಾರ್ಮಿಕ ಘಟಕದ ಅಧ್ಯಕ್ಷರನ್ನಾಗಿ ಶ್ರೀ ದಾರ್ಲಾ ದಾಸ್
ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷರಾದ ಶ್ರೀ ಬಸಂತಕುಮಾರ್ ಅನಂತಪುರ ರವರು ತಿಳಿಸಿದರು.
ಈ ಸಂಧರ್ಭದಲ್ಲಿ ಧಾರವಾಡ ಜಿಲ್ಲಾ ಅಧ್ಯಕ್ಷರಾದ ಸುರೇಶ್ ಕುಮಾರ್, ನಾಗರಾಜ್ ಜಾಲಿಗಿಡದ, ಕುಮಾರ್, ಬಸವರಾಜ್ ಕಬಡ್ಡಿ, ಮಲ್ಲಿಕಾರ್ಜುನ ಮತ್ತು ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
0 Response to "ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗಳಿಗೆ ಸನ್ಮಾನ: ಸಂಘಟನೆಯ ಪದಾಧಿಕಾರಿಗಳ ಆಯ್ಕೆ- Hubballi"
Post a Comment